ಭಾನುವಾರ, ಜುಲೈ 5, 2026
admin_panel_settings settings
share

Kaveri News Logo E-News

Kannada & English Editorial Portal

Kaveri News Logo

ಡಿಸೆಂಬರ್ 25 ರಿಂದ ಮೂರು ದಿನಗಳ ಕಾಲ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್ ಅಂತರರಾಷ್ಟ್ರೀಯ ಮಟ್ಟದ ಕಾರ್ಯಗಾರ

Kaverinews | Published on: | Views: 133
ಕೊಡಗು
ಡಿಸೆಂಬರ್ 25 ರಿಂದ ಮೂರು ದಿನಗಳ ಕಾಲ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್ ಅಂತರರಾಷ್ಟ್ರೀಯ ಮಟ್ಟದ ಕಾರ್ಯಗಾರ
ಈ ವರ್ಷ ಡಿಸೆಂಬರ್ 25 ರಿಂದ ಮೂರು ದಿನಗಳ ಕಾಲ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್ ಅಂತರರಾಷ್ಟ್ರೀಯ ಮಟ್ಟದ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷರಾದ ಬಿ ಆರ್ ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಈ ವರ್ಷ ಡಿಸೆಂಬರ್ 25 ರಿಂದ ಮೂರು ದಿನಗಳ ಕಾಲ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್ ಅಂತರರಾಷ್ಟ್ರೀಯ ಮಟ್ಟದ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷರಾದ ಬಿ ಆರ್ ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಕುಶಾಲನಗರ ಕನ್ನಿಕಾ ಇಂಟರ್ನ್ಯಾಷನಲ್ ಆವರಣದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಈ ಸಮಾವೇಶದಲ್ಲಿ

ಹಲವು ವಿಷಯಗಳನ್ನು ಒಂದೇ ವೇದಿಕೆಯಲ್ಲಿ ತಿಳಿದುಕೊಳ್ಳುವ ಚರ್ಚಿಸುವ ಅವಕಾಶ ದೊರೆಯಲಿದೆ. ಅನುಭವಿಗಳ ಸಾಧಕರ ಪ್ರೇರಣಾತ್ಮಕ ಮಾರ್ಗದರ್ಶಕರಿಂದ ಆತ್ಮವಿಶ್ವಾಸ ಹೆಚ್ಚಿಸುವ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಉದ್ಯೋಗದಿಂದ ಉದ್ಯಮಿಗಳ ನವೋದ್ಯಮಗಳನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಇರುವ ಅವಕಾಶಗಳು ಅನುಕೂಲಗಳು ಅಡೆತಡೆಗಳಿಗೆ ಪರಿಹಾರಗಳು ಸೇರಿದಂತೆ ಯುವ ಪೀಳಿಗೆಯ ಕನಸನ್ನು ನನಸು ಮಾಡಿಕೊಳ್ಳಲು ಉನ್ನತ ತಂತ್ರಜ್ಞಾನದ ಸಹಿತ ಹಲವು ಮಾಹಿತಿಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಈಗಾಗಲೇ ಇರುವ ತಮ್ಮ ವ್ಯಾಪಾರ ವ್ಯವಹಾರ ಉದ್ಯಮಗಳನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮಾರ್ಗದರ್ಶನ ಸಲಹೆ ಸಹಕಾರ ನೀಡುವ ಕಾರ್ಯ ಈ ಕಾರ್ಯಾಗಾರ ನಡೆಯಲಿದೆ. ಆರ್ಥಿಕ ಪಾಲುದಾರಿಕೆ ಅವಶ್ಯಕತೆ ಇದ್ದಲ್ಲಿ ಉನ್ನತ ಮಟ್ಟದ ತಂತ್ರಜ್ಞಾನದ ನೆರವು, ಎ ಐ ತಂತ್ರಜ್ಞಾನದ ಸದ್ಬಳಕೆ ಸವಾಲುಗಳು ಆಮದು ರಫ್ತು ವ್ಯವಹಾರಗಳು ರಿಯಲ್ ಎಸ್ಟೇಟ್ ವ್ಯವಹಾರ ಆಧುನಿಕ ಉದ್ಯಮಗಳು ಸ್ಪರ್ಧಾತ್ಮಕ ಸವಾಲುಗಳು ಸಮಸ್ಯೆಗಳು ವ್ಯವಸಾಯದ ಚಟುವಟಿಕೆಗಳ ವೈವಿಧ್ಯತೆಗಳು ಬ್ಯಾಂಕಿಂಗ್ ಕ್ಷೇತ್ರದಿಂದ ದೊರೆಯುವ ಸೌಲಭ್ಯಗಳು ಹೊಸ ಆವಿಷ್ಕಾರ ಅಳವಡಿಸಿಕೊಳ್ಳುವ ಬಗ್ಗೆ ಪರಿಣಿತರಿಂದ ಸಲಹೆ ನೀಡಲಾಗುತ್ತದೆ ಎಂದು ಅವರು ಹೇಳಿದರು.

ವಿಶ್ವದ ಪ್ರತಿಷ್ಠಿತ ಪ್ರೇರಣಾರ್ಥಕ ಸ್ಪೂರ್ತಿದಾಯಕ ಭಾಷಣಕಾರದಿಂದ ಮಾರ್ಗದರ್ಶನ ನೀಡಲಾಗುವುದು ಎಂದು ಅವರು ತಿಳಿಸಿದರು

ದಕ್ಷಿಣ ಭಾರತದ ಬಹುತೇಕ ಐದು ರಾಜ್ಯಗಳ ಸಮುದಾಯದ ಗಣ್ಯರು ಪ್ರತಿನಿಧಿಗಳು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸರ್ಕಾರದ ಸಚಿವರುಗಳು, ರಾಜ್ಯ ಸರ್ಕಾರದ ಜನಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದರು.

ನಮ್ಮ ಯುವ ಪೀಳಿಗೆ ವಿದ್ಯಾವಂತರು ವಿಶ್ವ ಮಟ್ಟದ ಉದ್ಯಮ ಕ್ಷೇತ್ರದಲ್ಲಿ ಬೆಳೆಯಬೇಕು ದೇಶದ ಆರ್ಥಿಕತೆಗೆ ಕೈಗಾರಿಕೋದ್ಯಮಕ್ಕೆ ದೊಡ್ಡ ಶಕ್ತಿಯಾಗಬೇಕು ಎನ್ನುವ ಉದ್ದೇಶದೊಂದಿಗೆ ಗ್ಲೋಬಲ್ ಆಕ್ಸಿಲೇಟರ್ ವಿಷನ್ ಸಮಿಟ್ ಹೆಸರಿನಲ್ಲಿ ಈ ಬೃಹತ್ ಕಾರ್ಯಾಗಾರ ನಡೆಯಲಿದೆ.

ಅಂದಾಜು 15 ಕೋಟಿ ವೆಚ್ಚದಲ್ಲಿ ಈ ಸಮಾವೇಶ ಮೂರು ದಿನಗಳ ಕಾಲ ನಡೆಯಲಿದ್ದು ಸುಮಾರು 1.5 ಲಕ್ಷ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕರ್ನಾಟಕ ಆರ್ಯವೈಶ್ಯ ಮಹಾಸಭಾ ಕೇವಲ ಒಂದು ಸಂಘಟನೆಯಾಗಿ ಮಾತ್ರ ಉಳಿಯದೆ, ಸಂಕಷ್ಟದಲ್ಲಿರುವವರ ಕಲ್ಪ ವೃಕ್ಷ ದಂತೆ ಕೆಲಸ ಮಾಡುತ್ತಿದೆ. ಕಳೆದ 8 ವರ್ಷಗಳಲ್ಲಿ ಸಮಾಜದ ಕಲ್ಯಾಣ ಕಾರ್ಯಕ್ರಮಗಳಿಗೆ ಸುಮಾರು 40 ಕೋಟಿ ರೂಪಾಯಿಗಳಿಗೂ ಮೀರಿದ ಬೃಹತ್ ಮೊತ್ತವನ್ನು ಅಶಕ್ತರ, ಅಬಲರ ಅವಶ್ಯಕತೆ ಇರುವವರಿಗೆ ಕಾಮಧೇನುವಾಗಿ ನೀಡುತ್ತಾ ಬಂದಿದೆ ಎಂದ ನಾಗೇಂದ್ರ ಪ್ರಸಾದ್, ಆರ್ಯವೈಶ್ಯರು ವ್ಯಾಪಾರ- ವ್ಯವಹಾರ, ಕೈಗಾರಿಕಾ ಉದ್ಯಮಿಗಳೆಂದು ಉದ್ಯೋಗ ಅರಸಿ ಹೋಗದೆ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಿದ್ದಾರೆ ಎಂದು ಹೇಳಿದರು.

ಪ್ರಪಂಚದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸುವ ನೈಪುಣ್ಯದ ಕೊರತೆ ಯುವ ಜನತೆಯಲ್ಲಿ ಸವಾಲುಗಳನ್ನು ಸ್ವೀಕರಿಸಿ ಉದ್ಯಮಗಳನ್ನು ನಡೆಸುವ ಆತ್ಮಾಭಿಮಾನದ ಕೊರತೆಯಿಂದ ಉದ್ಯಮಗಳನ್ನು ನಡೆಸುತ್ತಿದ್ದ ಸಮಾಜದ ಬಹುತೇಕ ಯುವಜನತೆ ಇಂದು ಮೂಲನೆಲೆ ಬಿಟ್ಟು ಉದ್ಯೋಗಗಳತ್ತ ಮುಖ ಮಾಡಿರುವುದು ಸಮಾಜದ ನಿರೀಕ್ಷಿತ ಅಭಿವೃದ್ಧಿಗೆ ಆತಂಕವನ್ನು ಒಡ್ಡಿದೆ ಎಂದು ಹೇಳಿದ ಅವರು, ಜಿಲ್ಲೆಯ ಪ್ರತಿಯೊಬ್ಬ ಯುವಕ ಯುವತಿಯರು ವಿದ್ಯಾರ್ಥಿಗಳು ಈ ಕಾರ್ಯಗಾರದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸಲು ಉದ್ದೇಶಿಸಿರುವ ಈ ರೀತಿಯ ಸಮಾವೇಶ ಮೂಲಕ ಮುಂದಿನ ಐದು ವರ್ಷಗಳಲ್ಲಿ ಸುಮಾರು 5 ಸಾವಿರ ನವೋದ್ಯಮಗಳ ಸ್ಥಾಪನೆ ತನ್ಮೂಲಕ 5 ಲಕ್ಷ ಉದ್ಯೋಗಗಳ ಸೃಷ್ಟಿ ಮಾಡುವುದು ಗುರಿಯಾಗಿದೆ ಎಂದರು.

ಕರ್ನಾಟಕ ಆರ್ಯವೈಶ್ಯ ಮಹಾಸಭಾ ರಾಜ್ಯಾಧ್ಯಕ್ಷರಾದ ಆರ್ ಪಿ ರವಿಶಂಕರ್ ಮತ್ತು ಗೌರವಾಧ್ಯಕ್ಷರಾದ ಟಿ ಜಿ ಭರತ್ ಅವರ ನೇತೃತ್ವದಲ್ಲಿ ಪೂರ್ವ ಸಿದ್ಧತೆ ನಡೆಯುತ್ತಿದೆ ಎಂದರು.

ಈ ಅಂತರಾಷ್ಟ್ರೀಯ ಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ

ಆಗಸ್ಟ್ 23ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆಯನ್ನು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ದ್ವಿಚಕ್ರವಾಹನಗಳ,ಪಾದಯಾತ್ರೆ, ರ್ಯಾಲಿಗಳ ಮೂಲಕ, ಸಾಮೂಹಿಕ ಸಭೆಗಳ ಮೂಲಕ ಬೈಚನಹಳ್ಳಿಯಿಂದ ಆರಂಭಗೊಂಡು ಮುಖ್ಯರಸ್ತೆಯಲ್ಲಿ ಕುಶಾಲನಗರ ರಥ ಬೀದಿ ಮೂಲಕ ಆಂಜನೇಯ ದೇವಾಲಯ ತನಕ ಸಾಗಲಿದೆ ಎಂದು ಮಾಹಿತಿ ನೀಡಿದರು.

ಕುಶಾಲನಗರ ಡಿ ವೈ ಎಸ್ ಪಿ ಚಂದ್ರಶೇಖರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ನಾಗೇಂದ್ರ ಪ್ರಸಾದ್ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ. ಇದೇ ಸಂದರ್ಭ ಗೋಷ್ಠಿಯಲ್ಲಿ ಬಿತ್ತಿ ಪತ್ರ ಬಿಡುಗಡೆ ಮಾಡಿದರು.


ಪತ್ರಿಕಾಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಕಾರ್ಯದರ್ಶಿ ಪ್ರವೀಣ್, ಖಜಾಂಚಿ ಪಿ ಎಸ್ ಪ್ರಶಾಂತ್, ಕನ್ನಿಕಾ ಪರಮೇಶ್ವರಿ ಸಹಕಾರ ಸಂಘದ ಅಧ್ಯಕ್ಷ ಅಮೃತ್ ರಾಜ್, ವಾಸವಿ ಸಮಾಜದ ನಿರ್ದೇಶಕ ಕೆ.ಜೆ. ಸತೀಶ್ ಇದ್ದರು.

Share this article